ಸವದತ್ತಿ ಪಟ್ಟಣದ ಬಿ.ಜೆ.ಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಮುಖಂಡರು ಹಾಗೂ ಕಾರ್ಯಕರ್ತರನ್ನು ಬರಮಾಡಿಕೊಂಡು ಕಾಂಗ್ರೆಸ್ನಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗುತ್ತದೆ. ಪಕ್ಷದ ಸಿದ್ಧಾಂತ ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಮಿತ್ರರಿಗೆ ಅಭಿನಂದನೆ ತಿಳಿಸಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು ಸವದತ್ತಿ ಪುರಸಭೆ ಸದಸ್ಯರಾದ ಶಿವಾನಂದ ಹೂಗಾರ, ಮೌಲಾಸಾಬ್ ತಬ್ಬಲಜಿ, ಪ್ರವೀಣ್ ಪಟ್ಟಣಶೆಟ್ಟಿ, ಮಂಜುನಾಥ ಬೇಡಸೂರ, ಹಾಗೂ ಬಿಜೆಪಿ ಮುಖಂಡರಾದ ರಾಜು ಹಳಕಟ್ಟಿ, ರಾಮಾಚಾರಿ ಲಮಾಣಿ, ಸೇರಿ ಅನೇಕ ಮುಖಂಡರು, ಕಾರ್ಯಕರ್ತರು ಯುವ ಮಿತ್ರರು ಸೇರ್ಪಡೆಯಾದರು.