Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ
ಬೆಂಗಳೂರು, ಏಪ್ರಿಲ್ 24: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ, ಚಿನ್ನ, ಬೆಳ್ಳಿ ಸೇರಿದಂತೆ ಬೆಲೆವಾಳುವ ವಸ್ತುಗಳನ್ನು ಅಕ್ರಮವಾಗಿ ಸಾಗಿಸದಂತೆ ಅಧಿಕಾರಿಗಳು ಬಿಗಿ ಬಂದೋಬಸ್ತ್ ಮಾಡಿದ್ದು, ಆದಾಯ ತೆರಿಗೆ ಇಲಾಖೆ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ಅಕ್ರಮ ವಹಿವಾಟಿನ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಈ ಕಾರ್ಯಾಚರಣೆ ಮುಂದುವರಿದ ಭಾಗವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ 16 ಕಡೆಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದು, ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆಯಾಗಿದೆ. ಬರೋಬ್ಬರಿ 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ ಹಾಗೂ 1.33 ಕೋಟಿ ನಗದು ಪತ್ತೆಯಾಗಿದೆ.