
ಇಂದು ಹಿರಿಯೂರಿನ ರೋಟರಿ ಭವನದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕ್ಷೇತ್ರದ ಸಭೆಯಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಹಾಗೂ ನೌಕರರ ವಿಭಾಗದ ರಾಜ್ಯಾಧ್ಯಕ್ಷರದ ಜಿ.ಎಸ್.ಮಂಜುನಾಥ್ ರವರು ಸಭೆಯನ್ನು ಉದ್ಘಾಟಿಸಿ ಶಿಕ್ಷಕರು ಮತ್ತು ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ರವರು, ಮಾಜಿ ಶಾಸಕಿಯಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡರವರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬುರವರು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಮತ್ತು ಪದವೀಧರ ವಿಭಾಗದಲ್ಲಿ ಅಧ್ಯಕ್ಷರಾದ ಮುದಾಸಿರ್ ನವಾಜ್ ರವರು ಹಿರಿಯೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ನಗರಸಭಾ ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
ವರದಿ : M H Nadaf