ಬೆಂಗಳೂರು, ಜೂನ್ 03: ದೇಶದಲ್ಲೇ ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನ ಕೊಟ್ಟ ರಾಜ್ಯ ಎಂದರೆ ಅದು ಕರ್ನಾಟಕ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್, ಲೋಕಸಭಾ ಚುನಾವಣೆಯ ಬಳಿಕ ರದ್ದಾಗುತ್ತದೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗಿತ್ತು.
ಹೌದು, ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಪಂಚ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹೇಳಿದ್ದೇನೆ ಎಂದು ಈ ಹಿಂದೆ ಮಾಗಡಿ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿದರು
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಬರಬೇಕು. ಒಂದು ವೇಳೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವೇನಾದರೂ ಕಡಿಮೆ ಸ್ಥಾನ ಗಳಿಸಿದರೆ, ಜನ ಗ್ಯಾರಂಟಿಗಳನ್ನು ತಿರಸ್ಕರಿಸಿದ್ದಾರೆ ಎಂದರ್ಥ. ಆಗ ಅವುಗಳನ್ನು ರದ್ದು ಮಾಡುವುದಾಗಿ ಬಾಲ ಕೃಷ್ಣ ಅಚರು ತಿಳಿಸಿದರು.
ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್‌ನ ಗ್ಯಾರಂಟಿ ಬೇಕೊ ಎಂದು ಜನ ಈ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು. ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ.
ಅವುಗಳ ಆಧಾರದ ಮೇಲೆಯೇ ಜನರ ಬಳಿ ಮತ ಕೇಳುತ್ತೇವೆ ಎಂದು ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಗ್ಯಾರಂಟಿಗಳ ಕುರಿತು ಮಾತನಾಡಿದ್ದರು. ಇದೀಗ ಮತದಾನ ಮುಗಿಯುತ್ತಿದ್ದಂತೆಯೇ ಚುನಾವಣೋತ್ತರ ಸಮೀಕ್ಷೆ ಹೊರಬೀದಿದ್ದು, ಆಡಳಿತರೂಢ ಕಾಂಗ್ರೆಸ್ ನಾಯಕರಿಗೆ ಅಘಾತ ಉಂಟಾಗಿದೆ.
ಹಲವು ವಾಹಿನಿಗಳು ನಡೆಸಿರುವ ಎಕ್ಸಿಟ್ ಪೋಲ್ ನಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ 3-4 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದೆ. ಇತ್ತ ಎಕ್ಷಿಟ್ ಪೋಲ್ ಸಮೀಕ್ಷೆಯಿಂದ ಕಾಂಗ್ರೆಸ್ ನಾಯಕರು ತೀವ್ರ ಬೇಸರಗೊಂಡಿದ್ದು, ಅಂದುಕೊಂಡಂತೆ ಕಾಂಗ್ರೆಸ್ ಕನಿಷ್ಟ 10 ಕ್ಷೇತ್ರಕ್ಕಿಂತ ಅಥವಾ 15 ಕ್ಷೇತ್ರಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸದಿದ್ದರೇ ಕಾಂಗ್ರೆಸ್ ತಂದ ಗ್ಯಾರಂಟಿ ಯೋಜನೆಗಳು ರದ್ದಾಗುತ್ತಾ ಎನ್ನುವ ಆತಂಕ ಜನರಲ್ಲಿ ಶುರುವಾಗಿದೆ. ಈ ಆತಂಕ ಶುರುವಾಗಲು ಈ ಹಿಂದೆ ಮಾಗಡಿ ಕಾಂಗ್ರೆಸ್ ಶಾಸಕ ಬಾಲ ಕೃಷ್ಣ ಅವರ ಹೇಳಿಕೆಯೇ ಕಾರಣ ಎನ್ನಲಾಗಿದೆ.