ಗದಗ: ಬೆಳ್ಳಂಬೆಳಿಗೆ ಬೆಚ್ಚಿಬೀಳಿಸುವ ಸುದ್ದಿ ಹೊರಬಿದ್ದಿದ್ದು, ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಲಗಿದಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಆಘಾತಕಾರಿ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ.
ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದ ಬಾಕಳೆ ಪುತ್ರ ಕಾರ್ತಿಕ್(27), ಪರಶುರಾಮ(55), ಪತ್ನಿ ಲಕ್ಷ್ಮಿ(45), ಪುತ್ರಿ ಆಕಾಂಕ್ಷಾ(16) ಕೊಲೆಯಾದವರು ಎನ್ನಲಾಗಿದೆ.
ನಾಲ್ವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತರು ಮದುವೆ ಸಮಾರಂಭಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.