ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ

ಮಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದೆ. ಆದರೆ ಮಂಗಳೂರಿನ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಗೂಂಡಾಗಿರಿ ನಡೆಸಿರುವುದು ಬೆಳಕಿಗೆ ಬಂದಿದೆ.
ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಜೊತೆ ಜನ ಸೇರಿರೋದನ್ನು ಬಿಜೆಪಿ ಕಾರ್ಯಕರ್ತ ಪ್ರಶ್ನಿಸಿದ್ದಾನೆ. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್‌ ಗಿರಿನಾಥ್‌
ಬಿಜೆಪಿ ಕಾರ್ಯಕರ್ತರ ಸಂದೀಪ್ ಎಕ್ಕೂರು ಹಾಗೂ ಕಾರ್ಯಕರ್ತರಿಂದ ಮಾತಿನ ಚಕಮಕಿ ನಡೆದಿದೆ. ಅಲ್ಲದೇ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆದಿದ್ದು, ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದಿದ್ದಾರೆ. ಇತ್ತ ಇದನ್ನು ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಅವಾಚ್ಯ ಶಬ್ದಗಳಿಂದ ನಿಂದನೆ ಮಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!
× How can I help you?