ಬೆಂಗಳೂರು, ಮೇ 14: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದೆ. ಇತ್ತ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಟಾರ್ಗೆಟ್ ನಂತೆ ನಾವು ಚುನಾವಣೆಯಲ್ಲಿ ಅತೀ ಹೆಚ್ಚು ಕ್ಷೇತ್ರವನ್ನ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ನೀಡಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.